ಈ ಸದನದಲ್ಲಿ ನಿಜವಾಗಿ ವಿರೋಧ ಪಕ್ಷದ ನಾಯಕ ಎಂದರೆ ನಾನೇ. ನಾನು ಅಡ್ಜಸ್ಟ್ಮೆಂಟ್ ಗಿರಾಕಿ ಅಲ್ಲ, ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಮುಖ್ಯಮಂತ್ರಿಗಳ ಕಚೇರಿಗೂ ಹೋಗಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನ ಸಭೆಯಲ್ಲಿ ಹೇಳಿದ್ದಾರೆ. ಅಲ್ಲದೆ ಡೆಪ್ಯೂಟಿ ಸ್ಪೀಕರ್ ಪಕ್ಕದಲ್ಲಿ ತಮಗೆ ಒಂದು ಕುರ್ಚಿ ನಿಗದಿಪಡಿಸೋದಾದ್ರೆ ನಿಗದಿಪಡಿಸಿ ಎಂದು ಸ್ಪೀಕರ್ ಖಾದರ್ಗೆ ತಿಳಿಸಿದ್ದಾರೆ.