ಬೆಳಗಾವಿ ನಗರದ ಮಾರುತಿ ಗಲ್ಲಿಯಲ್ಲಿ ಧಾರಾಕಾರ ಮಳೆಗೆ ಬೃಹತ್ ಮರವೊಂದು ಧರೆಗುರುಳಿದ್ದು, ಘಟನೆಯಲ್ಲಿ ಓರ್ವ ಬಾಲಕಿ ಗಾಯಗೊಂಡಿದ್ದಾಳೆ ಹಾಗೂ ಕೆಳಗಡೆ ನಿಲ್ಲಿಸಿದ್ದ 3 ಬೈಕ್ಗಳು ಸಂಪೂರ್ಣ ಜಖಂಗೊಂಡಿವೆ. ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.