ಬೆಳಗಾವಿ ಡಿಸಿ ಕಚೇರಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ಬೀದಿ ಬದಿ ವರ್ತಕರೊಬ್ಬರು ಕಣ್ಣೀರು ಹಾಕಿದ್ದಾರೆ. ಮಳೆ ಹಾಗೂ ಬಿಸಿಲಿನ ಬೇಗೆಗೆ ತರಕಾರಿಗಳು ಹಾಳಾಗಿ ಸಂಕಷ್ಟಕ್ಕೆ ಸಿಲುಕಿರುವ ವ್ಯಾಪಾರಿ, "ನಿಮ್ಮ ಕಾಲಿಗೆ ಬೀಳುತ್ತೇನೆ, ನಮಗೆ ದಯಾಮರಣ ಕೊಡಿಸಿ" ಎಂದು ಅಳಲು ತೋಡಿಕೊಂಡಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.