ಬೆಳ್ಳಂದೂರು ವೆಂಕಟ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಕದಿಯಲು ಯತ್ನಿಸಿದ ಸೂರಜ್ ಕುಮಾರ್ ಎಂಬಾತನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದರು. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾನಸಿಕ ಅಸ್ವಸ್ಥನಾಗಿರುವ ಸೂರಜ್ಗೆ ಪೊಲೀಸರು ಚಿಕಿತ್ಸೆ ನೀಡಿಸುತ್ತಿದ್ದು, ಕುಟುಂಬ ಸದಸ್ಯರಿಗೆ ಬುದ್ಧಿವಾದ ಹೇಳಿದ್ದಾರೆ. ಇದನ್ನು ಕಳ್ಳತನ ಯತ್ನ ಪ್ರಕರಣ ಎಂದು ಪರಿಗಣಿಸಲಾಗಿದೆ.