ಒಂದು ಗಂಟೆಗೂ ಹೆಚ್ಚು ಕಾಲ ಬಳ್ಳಾರಿಯಲ್ಲಿ ಸುರಿದ ಭಾರೀ ಮಳೆಯಿಂದ ನಗರದ ರಸ್ತೆಗಳು ಜಲಾವೃತಗೊಂಡಿವೆ. ವಿಶೇಷವಾಗಿ ದುರ್ಗಮ್ಮ ರಸ್ತೆಯು ಮಳೆ ನೀರಿನಿಂದ ತುಂಬಿ ವಾಹನ ಸವಾರರು ಪರದಾಟ ನಡೆಸಿದ ಪ್ರಸಂಗ ನಡೆದಿದೆ. ಡ್ರೈನೇಜ್ಗಳ ಸರಿಯಾದ ನಿರ್ವಹಣೆ ಇಲ್ಲದಿರುವುದೇ ಇದಕ್ಕೆ ಮೂಲ ಕಾರಣ ಎಂದು ಸಾರ್ವಜನಿಕರು ಮಹಾನಗರಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.