ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ನಲ್ಲಿ ಎಂಜಿನ್ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಚಾಲಕ ಸಮಯ ಪ್ರಜ್ಞೆಯಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಕನಕಪುರ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.