ಬೆಂಗಳೂರಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಸ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ. ಬಾಗಲೂರು ಕ್ರಾಸ್ ಬಳಿಯ ಅಮೇಜಾನ್ ಕಚೇರಿ ಗೇಟ್ ನಂಬರ್ 3ರ ಬಳಿ ಘಟನೆ ಸಂಭವಿಸಿದೆ. ಸ್ಪೋಟದ ರಭಸಕ್ಕೆ ಬೆಂಕಿ ತಗುಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟಗಾಯವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಯಲಹಂಕ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.