ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಮಧ್ಯರಾತ್ರಿ ಬ್ರೇಕ್ ಫೇಲ್ ಆದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಕೆ.ಆರ್. ಪುರಂನಿಂದ ಕೆಂಗೇರಿಗೆ ಕಬ್ಬಿಣದ ರಾಡ್ ತುಂಬಿಕೊಂಡು ಬರುತ್ತಿದ್ದ ಲಾರಿ ನಿಯಂತ್ರಣ ಕಳೆದುಕೊಂಡಿದೆ. ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಅಂಗಡಿ ಮುಂಭಾಗದಲ್ಲಿದ್ದ ಆಟೋಗೆ ನುಗ್ಗಿದ್ದು, ಆಟೋ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.