ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ಯಾರ್ಡ್ನಲ್ಲಿ ನಿಲ್ಲಿಸಲಾಗಿದ್ದ ಖಾಲಿ ರೈಲು ಬೋಗಿಯೊಂದರಲ್ಲಿ ದಿಢೀರ್ ಅಗ್ನಿ ಅವಘಡ ಸಂಭವಿಸಿದೆ. ಮಾಕ್ ಡ್ರಿಲ್ ಉದ್ದೇಶಕ್ಕಾಗಿ ಹಲವು ದಿನಗಳಿಂದ ಹಳಿಯ ಹೊರಭಾಗದಲ್ಲಿ ಇರಿಸಲಾಗಿದ್ದ ಈ ಬೋಗಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಧಗಧಗಿಸಿ ಉರಿದಿದೆ. ಬೋಗಿಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದ್ದು, ಸ್ಥಳೀಯ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.