ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆಯ ಭಾಗವಾಗಿ ಬೆಂಗಳೂರು ಸಂಚಾರಿ ಪೊಲೀಸರು ಬೈಕ್ ರ್ಯಾಲಿಯನ್ನು ಆಯೋಜಿಸಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ಭಾಗವಹಿಸಿದರು. ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ರ್ಯಾಲಿಗೆ ಆಯುಕ್ತರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.