ಬೆಂಗಳೂರಿನ ರಾಜಾಜಿನಗರದ ಇಎಸ್ಐ ಆಸ್ಪತ್ರೆ ಮುಂದೆ ಬುಧವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಮರದ ಕೊಂಬೆಗಳು ಮುರಿದು ಬಿದ್ದಿವೆ. ಇದರ ಪರಿಣಾಮವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಪ್ಯಾಸೆಂಜರ್ ಆಟೋಗಳು ಹಾಗೂ ಒಂದು ಲಗೇಜ್ ಆಟೋ ಸಂಪೂರ್ಣವಾಗಿ ಜಖಂಗೊಂಡಿದ್ದು, ಬಿಬಿಎಂಪಿ ಅರಣ್ಯ ಇಲಾಖೆ ಸಿಬ್ಬಂದಿ ತೆರವು ಕಾರ್ಯ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ.