ಸಿಗ್ನಲ್ನಲ್ಲಿ ಹಾರ್ನ್ ಮಾಡಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಯುವಕರು ಹಲ್ಲೆ ನಡೆಸಿದ ಘಟನೆ ಕೂಡ್ಲು ಗೇಟ್ ಬಳಿ ಗುರುವಾರ ಸಂಜೆ 7 ಗಂಟೆಗೆ ನಡೆದಿದೆ. ಬೈಕ್ ಸವಾರರು ಕ್ಯಾಬ್ ಚಾಲಕನ ಮೇಲೆ ಮನಸೋ ಇಚ್ಛೆ ಥಳಿಸಿದ್ದಾರೆ. ಘಟನೆಯನ್ನು ಇತರ ಸವಾರರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ಈಗ ವೈರಲ್ ಆಗುತ್ತಿದೆ.