ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೆರೆ ಮೂಡಲಪಾಳ್ಯ ಗ್ರಾಮದಲ್ಲಿ ಭಾರಿ ಕಳ್ಳತನ ನಡೆದಿದೆ. ಹಬ್ಬಕ್ಕೆ ಸಂಬಂಧಿಕರ ಮನೆಗೆ ತೆರಳಿದ್ದ ಜೈರೇಗೌಡರ ಮನೆಯ ಬೀಗ ಒಡೆದು ನುಗ್ಗಿದ ಕಳ್ಳರು, ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನ ಹಾಗೂ ಅರ್ಧ ಕೆಜಿ ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.