ಬೆಂಗಳೂರಿನ ಅತ್ಯಂತ ಜನದಟ್ಟಣೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಿರ್ಮಿಸಲಾಗಿರುವ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್ ಈಗ ಸಾರ್ವಜನಿಕ ಬಳಕೆಗೆ ಲಭ್ಯವಾಗಿದೆ. ಬಿಎಂಆರ್ಸಿಎಲ್ ನಿರ್ಮಿಸಿರುವ ಈ ದ್ವಿಪಥ ಫ್ಲೈಓವರ್ನ ಕೆಳ ಹಂತದಲ್ಲಿ ವಾಹನಗಳು, ಮೇಲಿನ ಹಂತದಲ್ಲಿ ಮೆಟ್ರೋ ರೈಲು ಸಂಚರಿಸಲಿದೆ. ಇದು ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ಕಡಿಮೆ ಮಾಡಿ, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಿದೆ.