ಹುಟ್ಟುಹಬ್ಬದ ದಿನದಂದೇ ಅಪಘಾತದಲ್ಲಿ ಯುವಕ ದುರ್ಮರಣ ಹೊಂದಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಐವರಕಂಡಪುರ ಬಳಿ ನಡೆದಿದೆ. ಮೃತ ಯುವಕನನ್ನು ತೋಟದ ಗುಡ್ಡದಹಳ್ಳಿ ನಿವಾಸಿ ಪವನ್(24) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ 5:45ಕ್ಕೆ ಹುಟ್ಟುಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಗೂಡ್ಸ್ ವಾಹನ, ಬೈಕ್ ನಡುವೆಯಾಗಿ ಪವನ್ ಸ್ಥಳದಲ್ಲೇ ಸಾವಿಗೀಡಾಗಿದ್ದರು.