ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ 20 ದಿನಗಳಿಂದ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದೆ. ಭಾರತ್ ಗ್ಯಾಸ್ ಏಜೆನ್ಸಿ ಮುಂದೆ ಬೆಳಗ್ಗಿನಿಂದಲೇ ಗ್ರಾಹಕರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಪ್ರತಿದಿನ ಕೇವಲ 150 ಸಿಲಿಂಡರ್ ಮಾತ್ರ ವಿತರಿಸಲಾಗುತ್ತಿದ್ದು, ಶೇ. 90ರಷ್ಟು ಭಾರತ್ ಗ್ಯಾಸ್ ಹೊಂದಿರುವ ಗ್ರಾಹಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಸಮಸ್ಯೆ ನಿವಾರಣೆಗೆ ಪರಿಹಾರ ಸಿಕ್ಕಿಲ್ಲ.