ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ಯುವಕನೊಬ್ಬ ಮೊಸಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಪೊಲೀಸ್ ಠಾಣೆಗೆ ಬಂದಿರುವುದು ಜನರನ್ನು ಬೆರಗುಗೊಳಿಸಿದೆ. ಈ ಮೊಸಳೆ ಭತ್ತದ ಗದ್ದೆಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಆಗ ಅದೇ ಗ್ರಾಮದ ಓರ್ವ ಯುವಕ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಪೊಲೀಸ್ ಠಾಣೆಯವರೆಗೆ ಹೊತ್ತುಕೊಂಡು ಬಂದಿದ್ದಾನೆ. ಬಳಿಕ ಆ ಮೊಸಳೆಯನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಯಿತು.