ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯದಲ್ಲಿ ಅದ್ಧೂರಿಯಾಗಿ ಆಚರಿಸಲಾಗಿದೆ. ಜನ್ಮದಿನದಂದು ಮಂಡ್ಯಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದ್ದು, ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸೆಲೆಬ್ರೇಷನ್ ಮಾಡಲಾಗಿದೆ. ಹಾರ ಹಾಕಿ, ಹೂಗುಚ್ಛ ನೀಡಿ ಅಭಿಮಾನಿಗಳು ಹೆಚ್ಡಿಕೆಗೆ ಶುಭಾಶಯ ತಿಳಿಸಿದ್ದಾರೆ. ಕಾರ್ಯಕ್ರಮದ ಹಿನ್ನೆಲೆ ನಡೆದ ಬಿರಿಯಾನಿ ವಿತರಣೆ ವೇಳೆ ಮಹಿಳೆಯರು ಮುಗಿಬಿದ್ದ ದೃಶ್ಯ ಕಂಡುಬಂದಿದೆ.