ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಬೆಂಗಳೂರಿನಲ್ಲಿ ಬಿಜೆಪಿ ತ್ರಿವರ್ಣ ಧ್ವಜ ಯಾತ್ರೆಯನ್ನು ಆಯೋಜಿಸಿತ್ತು. ಕೆ.ಸಿ. ಜನರಲ್ ಆಸ್ಪತ್ರೆಯ ಮುಂಭಾಗದಿಂದ ಆರಂಭಗೊಂಡ ಈ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ಡಾ. ಸಿ.ಎನ್. ಅಶ್ವಥನಾರಾಯಣ್ ಸೇರಿದಂತೆ ಹಲವು ಗಣ್ಯ ಮುಖಂಡರು ಭಾಗವಹಿಸಿ, ದೇಶಭಕ್ತಿ ಘೋಷಣೆಗಳನ್ನು ಮೊಳಗಿಸಿದರು.