ಚಲಿಸುತ್ತಿರುವಾಗಲೇ ಬಿಎಂಟಿಸಿ ಬಸ್ನ ಟೈರ್ ಬ್ಲಾಸ್ಟ್ ಆಗಿರುವ ಘಟನೆ ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿ ನಿನ್ನೆ (ಮೇ 3) ನಡೆದಿದೆ. ಬಸ್ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ್ದು, ಘಟನೆಯ ಭಯಾನಕ ದೃಶ್ಯ ಬೈಕ್ ಚಾಲಕನ ಹೆಲ್ಮೆಟ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ನ ಮುಂಭಾಗದ ಟೈರ್ ಬ್ಲಾಸ್ಟ್ ಆಗಿದೆ ಎನ್ನಲಾಗಿದೆ.