ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಯುವಕ ಸುಹಾಸ್ ಎಸ್. ಮತ್ತು ಉಡುಪಿ ನಿವಾಸಿ ಕಾತ್ಯಾಯಿನಿ ಅವರ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ ಸದ್ಯ ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಸುಹಾಸ್ಗೆ ಕಾರ್ಯಕ್ರಮಕ್ಕೆ ಬರಲು ಕಚೇರಿಯ ರಜೆಯ ಸಮಸ್ಯೆ ಆಗಿದೆ. ಹೀಗಾಗಿ ಆನ್ಲೈನ್ ಮೂಲಕ ಉಡುಪಿಯ ಸರಸ್ವತಿ ಸಭಾಭವನದಲ್ಲಿ ನಿಶ್ಚಿತಾರ್ಥ ನಡೆಸಲಾಗಿದೆ. ಕ್ಯಾಮರಾಗೆ ಉಂಗುರ ತೋರಿಸಿ ಯುವಕ ಮತ್ತು ಯುವತಿ ಉಂಗುರ ಧರಿಸಿದ್ದಾರೆ.