ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ 'ಇಂಡಿಯಾ' ಮೈತ್ರಿಕೂಟ ಹಮ್ಮಿಕೊಂಡಿದ್ದ ಜಂತರ್ ಮಂತರ್ ಪ್ರತಿಭಟನಾ ಜಾಥಾದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳ ಸಂಸದರನ್ನು ಜಂತರ್ ಮಂತರ್ಗೆ ಕರೆದೊಯ್ಯುತ್ತಿದ್ದ ಬಸ್ ಅನ್ನು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರೇ ತಡೆದು, ಪೊಲೀಸರು ಬಸ್ ಅನ್ನು ಮುನ್ನಡೆಸದಂತೆ ಟೈರ್ ಪಂಚರ್ ಮಾಡಿರುವ ಘಟನೆ ನಡೆದಿದೆ.