ರಸ್ತೆ ಮಧ್ಯೆಯೇ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮಡಿಕೇರಿಯ ವಿರಾಜಪೇಟೆ-ಮಾಕುಟ್ಟ ರಸ್ತೆಯಲ್ಲಿ ನಡೆದಿದೆ. ಮಾಕುಟ್ಟ ರಸ್ತೆಯ ಆಂಜನೇಯ ದೇವಾಲಯ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಪ್ರಯಾಣಿಕರು ಬಚಾವ್ ಆಗಿದ್ದು, ಯಾಬುದೇ ಪ್ರಾಣಹಾನಿ ಆಗಿಲ್ಲ. ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.