ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವರಿಗೆ ಸಿಎಂ ಎಚ್ಚರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಕೇಸ್ನಲ್ಲಿ ಸ್ಟಿಂಗ್ ಆಪರೇಷನ್ ಮಾಡಿದ್ದು ಯಾರು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ತಮ್ಮ ಶಾಸಕರ ಮೇಲೆಯೇ ಸ್ಟಿಂಗ್ ಮಾಡ್ತಾರೋ, ಯಾರು ಡಿಂಗ್ ಡಿಂಗ್ ಆಪರೇಷನ್ ಮಾಡಿದ್ದಾರೆಂದು ಗೊತ್ತಿದೆ ಎಂದು ಬಾಗಲಕೋಟೆಯಲ್ಲಿ ಹೇಳಿದ್ದಾರೆ.