ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಸಮೀಪ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ಪಿಯೂಷ್ ಕಾರಿನಿಂದ ಕೆಳಗಿಳಿದಿದ್ದಾರೆ. ಬಳಿಕ ನಡುರಸ್ತೆಯಲ್ಲೇ ನೋಡು ನೋಡುತ್ತಿದ್ದಂತೆಯೇ ಕಾರು ಹೊತ್ತಿ ಉರಿದಿದೆ.