ಎಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದಿರುವ ಘಟನೆ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಕಾರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಭಸ್ಮವಾಗಿದೆ. ಸ್ಥಳದಲ್ಲಿದ್ದವರು ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.