ಬೆಂಕಿ ಕಾಣಿಸಿಕೊಂಡ ಪರಿಣಾಮ ನಡುರಸ್ತೆಯಲ್ಲಿಯೇ ಕಾರೊಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಮಹದೇವಪುರದ ಗರುಡಚಾರ್ಯ ಪಾಳ್ಯದಲ್ಲಿ ನಡೆದಿದೆ. ಲೋಕೇಶ್ ಎಂಬುವರಿಗೆ ಸೇರಿದ ಸ್ವಿಫ್ಟ್ ಡಿಜೈರ್ ಕಾರು ಅಗ್ನಿಗೆ ಆಹುತಿಯಾಗಿದ್ದು, ಕಾರಿನ ಮುಂಭಾಗ ಬೆಂಕಿ ಕಾಣಿಸಿಕೊಳ್ತಿದ್ದಂತೆ ಚಾಲಕ ಲೋಕೇಶ್ ವಾಹನ ನಿಲ್ಲಿಸಿದ್ದರು. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಹದೇವಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.