ಚಾಲಕನ ಅಜಾಗರುಕತೆಯಿಂದ ಎದುರು ಬರುತ್ತಿದ್ದ ಸ್ಕೂಟರ್ಗೆ ಕಾರು ಡಿಕ್ಕಿಯಾದ ಘಟನೆ ಬಂಟ್ವಾಳ ತಾಲೂಕಿನ ಕುಡ್ತಮೊಗರಿನ ಕೊಲ್ನಾಡು ಎಂಬಲ್ಲಿ ನಡೆದಿದೆ. ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಚಾಲಕ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆಸಿದ್ದು, ಘಟನೆಯಲ್ಲಿ ಮಗು ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದೆ.