ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಹೊಲಕ್ಕೆ ಕಾರೊಂದು ಹಾರಿ ಬಿದ್ದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಬಳಿ ನಡೆದಿದೆ. ಕಾರಿನಲ್ಲಿದ್ದ ಮಮಾಕ್ಷ, ಪ್ರಜ್ವಲ್, ಗುರುಪ್ರಸಾದ್, ಹೇಮಂತ್ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.