ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ತಡರಾತ್ರಿ 12.40ಕ್ಕೆ ರೆನಾಲ್ಟ್ ಕಾರು ನಡುರಸ್ತೆಯಲ್ಲಿ ಹೊತ್ತಿ ಉರಿದಿದೆ. ಇಂಜಿನ್ನಿಂದ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕಾರನ್ನು ಆವರಿಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಕೂಡಲೇ ಹೊರಬಂದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರೂ, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.