ಡರ್ಟ್ ಟ್ರ್ಯಾಕ್ ರೇಸ್ ವೇಳೆ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾಕ್ನಲ್ಲಿಯೇ ಕಾರು ಪಲ್ಟಿ ಹೊಡೆದಿರುವ ದೃಶ್ಯ ಪ್ರೇಕ್ಷಕರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎದೆ ಝಲ್ ಎನಿಸುವಂತಿದೆ.