ಹರಿಯಾಣದ ನುಹ್ ಬಳಿ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಐವರು ಪ್ರಯಾಣಿಕರಿದ್ದ ಕಾರು ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಎಲ್ಲರೂ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಅಲ್ಲಿದ್ದ ಜನರು ಅವರ ರಕ್ಷಣೆಗೆ ಮುಂದಾಗಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.