ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಕ್ಲೀನ್ಚಿಟ್ ನೀಡಿದ್ದಾರೆ. ಇದು ಸುಳ್ಳು ಕಟ್ಟುಕಥೆ ಎಂದು ಸಿಸಿಬಿ ಹೇಳಿದೆ. ಇದರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಆರೋಪ ಮೊದಲಿನಿಂದಲೂ ಸುಳ್ಳು ಎಂಬುದು ತಿಳಿದಿತ್ತು. ಸತ್ಯಕ್ಕೆ ಜಯ ಸಿಕ್ಕಿದ್ದು, ತನಿಖೆ ನಿಷ್ಪಕ್ಷಪಾತವಾಗಿ ನಡೆದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.