ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಬಳಿ ಸಿಮೆಂಟ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಅದೃಷ್ಟವಶಾತ್, ಕಾರ್ಮಿಕರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಸದ್ಯ ಅಪಘಾತದ ವಿಡಿಯೋ ವೈರಲ್ ಆಗುತ್ತಿದೆ.