ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಿಹಳ್ಳಿ ಗ್ರಾಮದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಸಕ್ರಿಯವಾಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಸೆಪ್ಟೆಂಬರ್ 30ರ ರಾತ್ರಿ ಮೈಗೆಲ್ಲ ಎಣ್ಣೆ ಸವರಿಕೊಂಡು, ಕೈಯಲ್ಲಿ ಚಪ್ಪಲಿ ಹಿಡಿದು ಬಂದಿರುವ ಖತರ್ನಾಕ್ ಕಳ್ಳರ ತಂಡ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಕನ್ನ ಹಾಕಲು ಸಂಚು ರೂಪಿಸಿದೆ. ಚಡ್ಡಿ ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಈ ಗ್ಯಾಂಗ್ನ ಚಲನವಲನಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.