ಬೆಂಗಳೂರು-ಹೊಸೂರು ಹೆದ್ದಾರಿಯ ಹಳೆ ಚಂದಾಪುರ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯೇ ಇದಕ್ಕೆ ಕಾರಣ ಎನ್ನಲಾಗಿದ್ದು, ಎರಡು ಕಾರುಗಳು ಹಾಗೂ ಒಂದು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸೂರ್ಯನಗರ ಪೊಲೀಸರು ತಿಳಿಸಿದ್ದಾರೆ.