ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಮಂಚಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ. ರಾತ್ರಿ ವೇಳೆ ಜಮೀನುಗಳಿಗೆ ನುಗ್ಗಿದ ಆನೆ ಹಿಂಡು ಬಾಳೆ ಬೆಳೆಗಳನ್ನು ನಾಶಪಡಿಸಿದ್ದು, ರೈತರಿಗೆ ಭಾರಿ ನಷ್ಟ ಉಂಟುಮಾಡಿದೆ. ಸಫಾರಿ ಪುನರಾರಂಭದ ನಂತರ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಗ್ರಾಮಸ್ಥರು ನಿರಂತರ ಮಾನವ-ಆನೆ ಸಂಘರ್ಷದಿಂದ ರೋಸಿ ಹೋಗಿದ್ದಾರೆ. ರೈತರು ತಮ್ಮ ಬೆಳೆಗಳನ್ನು ರಕ್ಷಿಸಲು ಹಗಲಿರುಳು ಹೋರಾಡುತ್ತಿದ್ದಾರೆ.