ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೌದಳ್ಳಿ ಬಳಿ, ಕೊಳ್ಳೇಗಾಲ-ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಸೇತುವೆ ಭಾಗಶಃ ಕೊಚ್ಚಿ ಹೋಗಿದೆ. ಇದರಿಂದಾಗಿ ಮಾದಪ್ಪನ ಬೆಟ್ಟಕ್ಕೆ ತೆರಳಲು ಭಕ್ತರು, ಯಾತ್ರಾರ್ಥಿಗಳು ಪರದಾಡುವಂತಾಯಿತು.