ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮಲೆ ಮಹದೇಶ್ವರ ಬೆಟ್ಟ, ಗೋಪಾಲಸ್ವಾಮಿ ಬೆಟ್ಟ ಹಾಗೂ ಬಿಆರ್ ಹಿಲ್ಸ್ ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಫಾರಿಗೆ ತೆರಳಿದ ಪ್ರವಾಸಿಗರಿಗೆ ವಾಹನದ ಅತ್ಯಂತ ಸಮೀಪದಲ್ಲೇ ಹುಲಿ ದರ್ಶನ ನೀಡಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.