ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟವು ಆಷಾಢ ಮಾಸಕ್ಕಾಗಿ ಸಿದ್ಧಗೊಳ್ಳುತ್ತಿದೆ. ಚಾಮುಂಡೇಶ್ವರಿ ಅರಳಿಕಟ್ಟೆ ಸೇವಾ ಟ್ರಸ್ಟ್ ಮತ್ತು ಯುವ ಸ್ವಯಂಸೇವಕರು ಬೆಟ್ಟದ ಮೆಟ್ಟಿಲುಗಳು ಮತ್ತು ಗೋಪುರಗಳಿಗೆ ಸುಣ್ಣ-ಬಣ್ಣ ಬಳಿದು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಕಳೆದ ಆರು ವರ್ಷಗಳಿಂದ ಈ ಸೇವಾ ಕಾರ್ಯ ನಿರಂತರವಾಗಿ ನಡೆಯುತ್ತಿದೆ.