ಬೀರೂರಿನ ರಾಜಾಜಿನಗರದ ಬಾಡಿಗೆ ಮನೆಯಲ್ಲಿ ಪದ್ಮಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ತುಮಕೂರಿನವರಾದ ಪದ್ಮಾ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದ ತಿಪ್ಪೇಶ್ ಅವರು 13 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಕೆಲವು ಸಮಯದಿಂದ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದೇ ಕಾರಣಕ್ಕೆ ಮನನೊಂದು ಪದ್ಮಾ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 13 ವರ್ಷಗಳ ಸುದೀರ್ಘ ದಾಂಪತ್ಯ ಜೀವನ ನಡೆಸಿದ್ದ ಈ ಜೋಡಿಯ ನಡುವೆ ಅಂತಹದ್ದೇನಾಗಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.