ಚಿಕ್ಕಮಗಳೂರು ನಗರದ ಐಜಿ ರಸ್ತೆಯಲ್ಲಿರುವ ಫರ್ನಿಚರ್ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆ, ಬೀರು, ಸೋಫಾ ಸೆಟ್ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ. ರಾತ್ರಿ ಸುರಿದ ಸಾಧಾರಣ ಮಳೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.