ಚಿಕ್ಕಮಗಳೂರಿನಲ್ಲಿ ಸಂಜೆ ಸುರಿದ ಭಾರೀ ಬಿರುಗಾಳಿ ಮಳೆಯ ಆರ್ಭಟಕ್ಕೆ ಕಾರ್ಯಕ್ರಮವೊಂದಕ್ಕೆ ಹಾಕಿದ್ದ ಶಾಮಿಯಾನ ಮತ್ತು ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿವೆ. ಮಳೆಯ ತೀವ್ರತೆಗೆ ಶಾಮಿಯಾನ ಹಾರಿ ಹೋಗಿದ್ದು, ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಿಂದ ಕಾರ್ಯಕ್ರಮಕ್ಕೆ ಅಡಚಣೆಯಾಗಿದೆ.