ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮರಗಳು ಧರೆಗುರುಳುತ್ತಿವೆ. ಕಡೂರು ನಗರದ ಬಳಿ ಮರ ಬೀಳುವ ಮುನ್ನವೇ KSRTC ಬಸ್ ಒಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಈ ಘಟನೆ ಜನರ ಆತಂಕಕ್ಕೆ ಕಾರಣವಾಗಿದ್ದು, ಸಾರಿಗೆ ಬಸ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಮಳೆಯಿಂದಾಗಿ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ.