ಕಾಫಿನಾಡಿನಲ್ಲಿ ಹೆಚ್ಚಿದ ಕಾಡುಕೋಣಗಳ ಹಿಂಡು ಪ್ರತ್ಯಕ್ಷ!

×

ಕಾಫಿನಾಡಿನಲ್ಲಿ ಹೆಚ್ಚಿದ ಕಾಡುಕೋಣಗಳ ಹಿಂಡು ಪ್ರತ್ಯಕ್ಷ!

ಚಿಕ್ಕಮಗಳೂರು ಜಿಲ್ಲೆಯ ಆಮೆಕಟ್ಟೆ ಗ್ರಾಮದ ಕಾಫಿ ತೋಟಗಳಲ್ಲಿ ನೂರಾರು ಕಾಡುಕೋಣಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳೀಯ ಜನರಲ್ಲಿ ಹಾಗೂ ಕಾಫಿ ತೋಟದ ಕಾರ್ಮಿಕರಲ್ಲಿ ತೀವ್ರ ಆತಂಕವನ್ನು ಹುಟ್ಟುಹಾಕಿದೆ. ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಕಾಡುಕೋಣಗಳ ಉಪಟಳ ಹೆಚ್ಚಾಗುತ್ತಿದ್ದು, ಕಾಫಿ, ಅಡಿಕೆ, ಮೆಣಸು ಮತ್ತು ಬಾಳೆ ಬೆಳೆಗಳನ್ನು ನಾಶಪಡಿಸುತ್ತಿವೆ. ಕಾಡುಕೋಣಗಳ ಭಯದಿಂದಾಗಿ ಕಾರ್ಮಿಕರು ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಕಾಡುಕೋಣಗಳನ್ನು ಕಾಡಿಗೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

 

 

Bhavana Hegde