ಚಿಕ್ಕಮಗಳೂರಿನ ಕಾಫಿನಾಡಿನಲ್ಲಿ ಮಧ್ಯರಾತ್ರಿ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇತ್ತೀಚೆಗೆ ಐಜಿ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವೇಗದ ಚಾಲನೆ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.