ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಬುಡ ಸಮೇತ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ಬಿದ್ದ ಪರಿಣಾಮ ಚಿಕ್ಕಮಗಳೂರಿನ ಸಖರಾಯಪಟ್ಟಣ - ಬಾಣಾವರ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಡೂರು ತಾಲೂಕಿನ ಜೋಡಿಹೋಚಿಹಳ್ಳಿ ಸಮೀಪ ರಸ್ತೆಗೆ ಮರ ಉರುಳಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.