ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಇದು ಸಾಲು ಸಾಲು ಅವಾಂತರಗಳಿಗೆ ಕಾರಣವಾಗಿದೆ. ತೀವ್ರವಾದ ಬಿರುಗಾಳಿಯಿಂದಾಗಿ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಹಾನಿ ಸಂಭವಿಸಿದೆ. ಮಳೆ ಹಾಗೂ ಗಾಳಿಯ ಪರಿಣಾಮದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ.