ಹನೂರು ತಾಲೂಕಿನಲ್ಲಿ ಚಿರತೆಗಳ ಉಪಟಳ ನಿರಂತರವಾಗಿದ್ದು, ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ರಸ್ತೆ ಪಕ್ಕದಲ್ಲೇ ಎರಡು ಚಿರತೆಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಮಕ್ಕಳು, ವೃದ್ಧರು ಹಾಗೂ ರೈತರು ಭಯದಲ್ಲಿ ಬದುಕುತ್ತಿದ್ದು, ರಾತ್ರಿ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಅರಣ್ಯ ಇಲಾಖೆ ಚಿರತೆಗಳನ್ನು ಸೆರೆ ಹಿಡಿದು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.