ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಬಾಬಾಬುಡನ್ಗಿರಿ ಸಮೀಪದ ಹೊನ್ನಮ್ಮನ ಹಳ್ಳ ಜಲಪಾತದಲ್ಲಿ ದಿಢೀರ್ ಪ್ರವಾಹ ಉಂಟಾಗಿದೆ. ಘಾಟ್ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು. ಆದರೆ, ಈಗ ಅಪಾಯಕಾರಿ ಮಟ್ಟದಲ್ಲಿರುವ ನೀರಿನಿಂದ ದೂರವಿರುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮಲೆನಾಡು ಭಾಗದ ನದಿ, ಹಳ್ಳಗಳ ಸಮೀಪದ ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ.